ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
ಹೌದು. ರವೀಂದ್ರನಾಥ ಠಾಗೋರ್ ಸ್ಮರಣಾರ್ಥ ರಾಷ್ಟ್ರಗೀತೆ ಹಾಡಿದ್ದ ಅಮಿತಾಬ್ ತಪ್ಪಾಗಿ ಹಾಡಿದ್ದು, ನಿಯಮದ ಪ್ರಕಾರ 52ಸೆಕೆಂಡ್ ಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಆದರೆ ಅವರು ಒಂದು ನಿಮಿಷ 22 ಸೆಕೆಂಡ್ ಅವಧಿಯಲ್ಲಿ ಹಾಡುವ ಮೂಲಕ ರಾಷ್ಟ್ರಗೀತೆಗೆ ಅವಮಾನವೆಸಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ್ ಉಲ್ಲಾಸ್ ಎಂಬುವವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆದರೆ ದೆಹಲಿ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದು ಈ ಹಿನ್ನೆಲೆಯಲ್ಲಿ ಉಲ್ಲಾಸ್ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಅಮಿತಾಬ್ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಲ್ಲಿ ಕ್ರಮ ತೆಗೆದುಕೊಳ್ಳಿ ಎಂದು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.