ಮನೋರಂಜನೆ

ಕಿಲ್ಲಿಂಗ್ ವೀರಪ್ಪನ್ ಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಕಾರ

Pinterest LinkedIn Tumblr

veera

ಬೆಂಗಳೂರು: ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಚಿತ್ರಕ್ಕೆ ತಡೆ ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದ್ದು, ಆ ನಿಟ್ಟಿನಲ್ಲಿ ನಿಗದಿಯಂತೆ ಚಿತ್ರ ಜನವರಿ 1ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಒಪ್ಪಂದವನ್ನು ಉಲ್ಲಂಘಿಸಿ ಕನ್ನಡದಲ್ಲಿ ಚಿತ್ರ ನಿರ್ಮಿಸಿದ್ದು, ಅದಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ತಮಿಳು ನಿರ್ಮಾಪಕ ರಾಜಾ ಅವರು ಕಿಲ್ಲಿಂಗ್ ವೀರಪ್ಪನ್ ಬಿಡುಗಡೆಗೆ ತಡೆಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ತಿರಸ್ಕರಿಸಿದೆ. ವರ್ಮಾ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸಂದೀಪ್ ಭಾರದ್ವಾಜ್ ಹಾಗೂ ಪಾರುಲ್ ಯಾದವ್ ಮುಖ್ಯಭೂಮಿಕೆಯಲ್ಲಿದ್ದಾರೆ.
-ಉದಯವಾಣಿ

Write A Comment