ಮನೋರಂಜನೆ

ಅಜ್ಲಾನ್‌ ಶಾ ಹಾಕಿ ಕಪ್: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಭರ್ಜರಿ ಜಯ

Pinterest LinkedIn Tumblr

haki-16ಇಪೋ(ಮಲೇಷ್ಯಾ): 25ನೇ ಆವೃತ್ತಿಯ ಸುಲ್ತಾನ್ ಅಜ್ಲಾನ್ ಷಾ ಹಾಕಿ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸುವ ಮೂಲಕ 9ನೇ ಬಾರಿ ಅಜ್ಲಾನ್‌ ಶಾ ಹಾಕಿ ಕಪ್ ಅನ್ನು ತನ್ನದಾಗಿಸಿಕೊಂಡಿದೆ.
ಇಂದು ನಡೆದ ಫನೈಲ್ ಪಂದ್ಯದಲ್ಲಿ ಆಸೀಸ್ ತಂಡ ಭಾರತದ ವಿರುದ್ಧ 4-0 ಗೋಲುಗಳ ಅಂತರದಿಂದ ಜಯ ಗಳಿಸಿದ್ದು, ಭಾರತ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.
ನಿನ್ನೆ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ಮಲೇಷ್ಯಾ ವಿರುದ್ಧ 6-1 ಗೋಲುಗಳ ಭರ್ಜರಿ ಜಯ ಸಾಧಿಸುವ ಈ ಮೂಲಕ ಫೈನಲ್‌ ಪ್ರವೇಶಿಸಿತ್ತು.
ಅಜ್ಲಾನ್‌ ಶಾ ಹಾಕಿ ಚಾಂಪಿಯನ್‌ ಶಿಪ್‌ನಲ್ಲಿ ಭಾರತ 7ನೇ ಬಾರಿ ಫೈನಲ್‌ ಪ್ರವೇಶಿಸಿತ್ತು. ಈ ಹಿಂದೆ ಭಾರತ ಫೈನಲ್‌ ಪ್ರವೇಶಿಸಿದ್ದು 2010ರಲ್ಲಿ.

Write A Comment