ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಕಳೆದ ಹತ್ತು ವರ್ಷಗಳಲ್ಲೇ ಗೂಗಲ್ ನಲ್ಲಿ ಅತಿ ಹೆಚ್ಚು ಶೋಧಿಸಲ್ಪಟ್ಟ ಭಾರತೀಯ ನಟ, ನಟಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಅತಿ ಹೆಚ್ಚು ಶೋಧಿಸಲ್ಪಟ್ಟ ನಟರ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದ್ದು, ಸುಲ್ತಾನ್ ಸಲ್ಮಾನ್ ಖಾನ್ ಅವರು ಕಿಂಗ್ ಖಾನ್ ಶಾರುಖ್ ಖಾನ್, ಬಿಗ್ ಬಿ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.
ಇನ್ನು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ವರು ಅತಿ ಹೆಚ್ಚು ಶೋಧಿಸಲ್ಪಟ್ಟ ಟಾಪ್ 5 ನಟರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇತರೆ ಟಾಪ್ 10 ನಟರ ಪಟ್ಟಿಯಲ್ಲಿ ಹೃತಿಕ್ ರೋಷನ್, ಶಾಹಿದ್ ಕಪೂರ್, ರಣಬಿರ್ ಕಪೂರ್, ಆಮಿರ್ ಖಾನ್ ಮತ್ತು ಇಮ್ರಾನ್ ಹಶ್ಮಿ ಸ್ಥಾನ ಪಡೆದಿದ್ದಾರೆ.
ಕತ್ರಿನಾ ಕೈಫ್, ಕಾಜಲ್ ಅಗರವಾಲ್, ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಪ್ರಿಯಾಂಕ ಚೋಪ್ರಾ, ತಮನ್ನ ಭಾಟಿಯಾ, ಆಲಿಯಾ ಭಟ್ ಹಾಗೂ ಸೋನಾಕ್ಷಿ ಸಿನ್ಹಾ ಅವರು ಅತಿ ಹೆಚ್ಚು ಶೋಧಿಸಲ್ಪಟ ಟಾಪ್ 10 ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
Comments are closed.