ನವದೆಹಲಿ (ಪಿಟಿಐ): ಹಾಕಿ ಒಲಿಂಪಿಯನ್ ಮೊಹಮ್ಮದ್ ಶಾಹಿದ್ (56) ಬುಧವಾರ ನಿಧನರಾದರು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಗುರ್ಗಾಂವ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
‘ಬೆಳಿಗ್ಗೆ 10.45ಕ್ಕೆ ಅವರು ಕೊನೆಯುಸಿರೆಳೆದರು. ಪಾರ್ಥಿವ ಶರೀರವನ್ನು ವಾರಣಾಸಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲೇ ನಾಳೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಶಾಹಿದ್ ಅವರ ಪುತ್ರ ಮೊಹಮ್ಮದ್ ಸೈಫ್ ತಿಳಿಸಿದ್ದಾರೆ.
1980ರಲ್ಲಿ ಮಾಸ್ಕೊದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಭಾರತ ಹಾಕಿ ತಂಡದಲ್ಲಿ ಶಾಹಿದ್ ಇದ್ದರು. 1982 ಮತ್ತು 1986ರ ಸೋಲ್ ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಜಯಿಸಿದ್ದ ತಂಡದ ಸದಸ್ಯರಾಗಿದ್ದರು.
1979ರಲ್ಲಿ ಫ್ರಾನ್ಸ್ನಲ್ಲಿ ನಡೆದಿದ್ದ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಶಾಹಿದ್ ಆಡಿದ್ದರು.
Comments are closed.