ಮುಂಬೈ: ಬಾಲಿವುಡ್ನ ಸ್ಟಾರ್ ನಟಿ ಪ್ರಿಯಾಂಕ ಚೋಪ್ರಾ ಅವರ ಬಹುದಿನದ ಕನಸು ಸಾಕಾರಗೊಳ್ಳುವ ಕಾಲ ಹತ್ತಿರವಾಗಿದೆ. ಬರೋಬ್ಬರಿ 100 ಕೋಟಿ ರೂಪಾಯಿಯಲ್ಲಿ ಮನೆ ನಿರ್ಮಾಣವಾಗುತ್ತಿದ್ದು, ಶೀಘ್ರವೇ ಪಿಗ್ಗಿ ಗೃಹಪ್ರವೇಶ ಮಾಡಲಿದ್ದಾರೆ.
ವಾಣಿಜ್ಯ ನಗರಿ ಮುಂಬೈನ ಅಂದೇರಿ ಪಟ್ಟಣದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ನೂತನ ಮನೆಯ ಕೆಲಸ ಭರದಿಂದ ಸಾಗುತ್ತಿದೆ. ಈ ಮನೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರಲಿದ್ದು, ಆಧುನಿಕ ಅರಮನೆಯಂತೆ ಭಾಸವಾಗಬೇಕೆಂದು ಸ್ವತಃ ಪ್ರಿಯಾಂಕಾ ಹೇಳಿದ್ದಾರಾಂತೆ. ಅಷ್ಟೇ ಅಲ್ಲ ಇದಕ್ಕಾಗಿ ಧಾರಾಳವಾಗಿ ಹಣ ಸುರಿಯುತ್ತಿದ್ದಾರೆ. ಒಟ್ಟು 100 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ.