ಮನೋರಂಜನೆ

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ವಿಧಿವಶ

Pinterest LinkedIn Tumblr

ashok

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಅವರು ಗುರುವಾರ ವಿಧಿವಶರಾಗಿದ್ದಾರೆ.

ಅಲ್ಸರ್ ನಿಂದ ಬಳಲುತ್ತಿದ್ದ ಅಶೋಕ್ ಬಾದರದಿನ್ನಿ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗಿನ ಜಾವ 4.40ರ ಸುಮಾರಿಗೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಚಿತ್ರದುರ್ಗ ನಗರದ ಐಯುಡಿಸಿ ಲೇಔಟ್ ನ ಮನೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತಿದ್ದು, ಇಂದು ಸಂಜೆ ವೇಳೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಶೋಕ್ ಬಾದರದಿನ್ನಿ ಅವರು ರಂಗಭೂಮಿ ಕಲಾವಿದರಾಗಿದ್ದು, ಸನಾದಿ ಅಪ್ಪಣ್ಣ, ಅಂಜಗಂಡು, ಯುದ್ಧಖಂಡ ಸೇರಿದಂತೆ ಸಾಕಷ್ಟು ಚಲನಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿಗಳಿಸಿದ್ದಾರೆ.

Comments are closed.