ಮನೋರಂಜನೆ

ಹುಟ್ಟುಹಬ್ಬ ಆಚರಿಸಿಕೊಂಡ ರಾಕಿಂಗ್ ಸ್ಟಾರ್ ಯಶ್

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್‍ವುಡ್‍ನ ರಾಕಿಂಗ್ ಸ್ಟಾರ್ ಯಶ್ ಇಂದು 31ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾದ ಬಳಿಕ ಇದೇ ಮೊದಲ ಬಾರಿಗೆ ಪತ್ನಿ ರಾಧಿಕಾ ಪಂಡಿತ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಸುಮಾರು 15 ದಿನಗಳ ಹನಿಮೂನ್ ಪ್ರಯುಕ್ತ ವಿದೇಶ ಪ್ರವಾಸದಲ್ಲಿದ್ದ ಯಶ್, ರಾತ್ರಿ ಬೆಂಗಳೂರಿನ ಕತ್ರಿಗುಪ್ಪೆಯ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ್ರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಸಂಭ್ರಮಿಸಿದರು. ನೂರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದರು.

Comments are closed.