ಮನೋರಂಜನೆ

ನನ್ನ ಹಾಗೂ ಪ್ರಿಯಾಂಕಾ ಚೋಪ್ರಾ ನಡುವಿನ ಹೋಲಿಕೆ ಸರಿಯಲ್ಲ : ದೀಪಿಕಾ ಪಡುಕೋಣೆ

Pinterest LinkedIn Tumblr


ಲಾಸೆಂಜಲೀಸ್‌: ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಅವರಿಬ್ಬರು ಹಾಲಿವುಡ್‌ಗೆ ಪದಾರ್ಪಣೆ ಮಾಡುವ ಮೂಲಕ ತಮ್ಮದೇ ಆದ ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನನ್ನ ಹಾಗೂ ಪ್ರಿಯಾಂಕಾ ಚೋಪ್ರಾ ನಡುವಿನ ಹೋಲಿಕೆ ಸರಿಯಲ್ಲ ಎಂದು ನಟಿ ದೀಪಿಕಾ ಪಡುಕೋಣೆ ಅಭಿಪ್ರಾಯ ಪಟ್ಟಿದ್ದಾರೆ.

34 ವರ್ಷದ ಪ್ರಿಯಾಂಕಾ ಚೋಪ್ರಾ ಅಂತರರಾಷ್ಟ್ರೀಯ ಮಟ್ಟದ ‘ಕ್ವಾಟಿಂಕೋ’ ಟಿವಿ ಷೋ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಜತೆಗೆ 31 ವರ್ಷದ ದೀಪಿಕಾ ಪಡುಕೋಣೆ ‘ಟ್ರಿಪಲ್‌ ಎಕ್ಸ್‌ ಗ್ಸ್ಯಾಂಡಿಯಾರ್ ಕೇಜ್‌’ ಚಿತ್ರದಲ್ಲಿ ಪಾತ್ರ ಗಿಟ್ಟಿಸಿಕೊಳ್ಳುವ ಮೂಲಕ ದೊಡ್ಡಮಟ್ಟದಲ್ಲಿಯೇ ಹಾಲಿವುಡ್‌ಗೆ ಎಂಟ್ರಿ ಪಡೆದಿದ್ದಾರೆ.

ಹಾಲಿವುಡ್‌ನಲ್ಲಿ ದೀಪಿಕಾ ಮತ್ತು ಪ್ರಿಯಾಂಕಾ ಖ್ಯಾತಿ ಗಳಿಸುತ್ತಿದ್ದಂತೆ ಈ ಇಬ್ಬರು ನಟಿಯರ ನಡುವಿನ ಹೋಲಿಕೆ ಕುರಿತಾದ ಮಾತು ಹಾಗೂ ಮಾಹಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ದೀಪಿಕಾ ಪಡುಕೋಣೆ, ‘ಇಬ್ಬರ ನಡುವೆ ಹಲವು ವ್ಯತ್ಯಾಸಗಳಿದ್ದು, ಪ್ರತಿಯೊಬ್ಬರು ತಮ್ಮದೇ ಹಾದಿಯಲ್ಲಿ ಮುನ್ನಡೆಯುವ ಮಹಾತ್ವಕಾಂಕ್ಷೆಯನ್ನು ಹೊಂದಿರುತ್ತಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

Comments are closed.