ರಾಷ್ಟ್ರೀಯ

ಗುಜರಾತ್’ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಜಿಡಿಯು ಸ್ಪರ್ಧೆ; ಬಿಜೆಪಿಯೊಂದಿಗೆ ಮೈತ್ರಿ ಇಲ್ಲ…

Pinterest LinkedIn Tumblr

ನವದೆಹಲಿ: ಡಿಸೆಂಬರ್ ನಲ್ಲಿ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಶನಿವಾರ ಘೋಷಿಸಿದೆ. ಅಲ್ಲದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗ ಪಕ್ಷದ ಚಿಹ್ನೆ ಬಗ್ಗೆ ನಿರ್ಧರಿಸುವಂತೆ ನಿತೀಶ್ ಕುಮಾರ್ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ಗುಜರಾತ್ ನ ನಮ್ಮ ಸಾಂಪ್ರದಾಯಿಕ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆಸಿ ತ್ಯಾಗಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಇತರೆ ಯಾವುದೇ ಪಕ್ಷಗಳೊಂದಿಗೆ ನಾವು ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಹಿಂದೆ ಎನ್ ಡಿಎ ಮೈತ್ರಿಕೂಟದಲ್ಲಿದ್ದಾಗಲೂ ಜೆಡಿಯು ಗುಜರಾತ್ ನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿತ್ತು ಎಂದು ತ್ಯಾಗಿ ಹೇಳಿದ್ದಾರೆ.

Comments are closed.