ಮನೋರಂಜನೆ

ದೆಹಲಿಯಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ದಂಗಲ್ ನಟಿಗೆ ಲೈಂಗಿಕ ಕಿರುಕುಳ

Pinterest LinkedIn Tumblr

ಮುಂಬೈ: ಬಾಲಿವುಡ್​ನ ಹೆಸರಾಂತ ದಂಗಲ್​ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ದೆಹಲಿಯಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಘಟನೆ ನಡೆದಿದ್ದು ಈ ಕುರಿತಂತೆ ನಟಿ ತನ್ನ ದುಃಖವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ವಿಮಾನದಲ್ಲಿ ನಟಿಯ ಹಿಂದೆ ಕುಳಿತಿದ್ದ ಮಧ್ಯ ವಯಸ್ಕನೊಬ್ಬ ಮಲಗಿದ್ದ ವೇಳೆ ನಟಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ವ್ಯಕ್ತಿಯ ಚಿತ್ರವನ್ನು ಸೆರೆ ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಆದರೆ ಏರ್ ವಿಸ್ತಾರಾ ವಿಮಾನ ಸಿಬ್ಬಂದಿ ಯಾರೋಬ್ಬರು ಸಹಾಯಕ್ಕೆ ಬರಲಿಲ್ಲ. ಇದೀಗ ರಾಷ್ಟ್ರೀಯ ಮಹಿಳಾ ಆಯೋಗವು ವಿಮಾನ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಏರ್​ ವಿಸ್ತಾರ ವಿಮಾನ ಸಂಸ್ಥೆ ಸಹ ಘಟನೆ ಕುರಿತಂತೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು ಈ ಸಂಬಂಧ ತನಿಖೆ ನಡೆಸಿ ನ್ಯಾಯ ಒದಗಿಸುವುದಾಗಿ ಹೇಆಳಿದೆ.

Comments are closed.