
ಹೊಸದಿಲ್ಲಿ: ವಿವಾದಗಳಿಂದಲೇ ಸದ್ದು ಮಾಡಿದ ಬಾಲಿವುಡ್ನ ಪದ್ಮಾವತ್ ಚಿತ್ರ ಮುಂದಿನ ವಾರ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಅಲ್ಲಾವುದ್ದೀನ್ ಖಿಲ್ಜಿ ಪಾತ್ರಕ್ಕಾಗಿ ತಮ್ಮ ದೇಹವನ್ನು ಹುರಿಗೊಳಿಸಿದ್ದ ರಣವೀರ್ ಸಿಂಗ್ ಇದೀಗ ತಮ್ಮ ಮುಂದಿನ ಚಿತ್ರಕ್ಕಾಗಿ ದೇಹವನ್ನು ಬದಲಾವಣೆ ಮಾಡಿಕೊಂಡಿರುವ ಫೋಟೋ ನೋಡಿ ಅಭಿಮಾನಿಗಳು ಮೂಕವಿಸ್ಮಿತರಾಗಿದ್ದಾರೆ.
ರಣವೀರ್ ಸಿಂಗ್ ಅವರು ಝೋಯಾ ಅಖ್ತರ್ ನಿರ್ದೇಶನದ ‘ಗಲ್ಲಿ ಬಾಯ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕಿಯಾಗಿ ಆಲಿಯ ಭಟ್ ತೆರೆ ಹಂಚಿಕೊಳ್ಳುತ್ತಿದ್ದು, ಈಗಾಗಲೇ ಈ ಚಿತ್ರದ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ.
ವಿಶೇಷ ಅಂದರೆ ಪದ್ಮಾವತ್ ಚಿತ್ರಕ್ಕಾಗಿ ಜಿಮ್ನಲ್ಲಿ ವರ್ಕೌಟ್ ಮಾಡಿ ದೇಹವನ್ನು ದೈತ್ಯಾಕಾರವಾಗಿ ಹುರಿಗೊಳಿಸಿದ್ದ ಅವರು ಕೆಲವೇ ದಿನಗಳಲ್ಲಿ ಗಲ್ಲಿ ಬಾಯ್ ಚಿತ್ರಕ್ಕಾಗಿ ದೇಹವನ್ನು ದಂಡಿಸಿ ಸಖತ್ ಸ್ಲಿಮ್ ಅಂಡ್ ಫಿಟ್ ಆಗಿದ್ದಾರೆ. ಈ ಕುರಿತಾದ ಪೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಪದ್ಮಾವತ್ನಿಂದ ಗಲ್ಲಿ ಬಾಯ್ (Padmaavat -> Gully Boy) ಎಂಬ ಅಡಿಬರಹವನ್ನು ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿರುವ ಈ ಫೋಟೋ ಕುರಿತು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹಲವರು ರಣವೀರ್ ಸಿಂಗ್ ಅವರು ಸ್ಫೂರ್ತಿಯ ಚಿಲುಮೆ ಎಂದು ಪ್ರತಿಕ್ರಿಯಿಸಿದ್ದಾರೆ.
Comments are closed.