ಕರಾವಳಿ

ಕರ್ನಾಟಕದ ಕಾಂಗ್ರೆಸ್ ಸರಕಾರದ ಹಸಿವು ಮುಕ್ತ ರಾಜ್ಯದ ಗುರಿ ದೇಶಕ್ಕೆ ಮಾದರಿ : ಸಂಸದ ಆಸ್ಕರ್ ಫೆರ್ನಾಂಡಿಸ್

Pinterest LinkedIn Tumblr

ಮಂಗಳೂರು, ಫೆಬ್ರವರಿ.24: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರಕಾರ ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಹಯೋಗದೊಂದಿಗೆ ರಾಜೀವ ಗಾಂಧಿ ನಗರದಲ್ಲಿ ನಿರ್ಮಿಸಲಿರುವ ಜಿ+3 ಮಾದರಿಯ ವಸತಿ ಸಂಕೀರ್ಣಕ್ಕೆ ಸಂಸದ ಆಸ್ಕರ್ ಫೆರ್ನಾಂಡಿಸ್ ಅವರು ಶನಿವಾರ ಕುಲಶೇಖರದ ಕೋರ್ಡೇಲ್ ಸಭಾಂಗಣದಲ್ಲಿ ಸಾಂಕೇತಿಕವಾಗಿ ಶಿಲಾನ್ಯಾಸ ನೆರವೇರಿಸಿದರು.

 

ಬಳಿಕ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರಕಾರದ ಹಸಿವು ಮುಕ್ತ ರಾಜ್ಯದ ಗುರಿ ದೇಶಕ್ಕೆ ಮಾದರಿ ಎಂದು ಹೇಳಿದರು.

ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮನೆ ಇಲ್ಲದವರಿಗೆ 2 ಸಾವಿರ ಮನೆ ನಿರ್ಮಾಣದ ಗುರಿ ಇದೆ. ಈ ಯೋಜನೆಯಲ್ಲಿ 930 ಫ್ಲ್ಯಾಟ್ ಗಳ 70 ಕೋಟಿ ರೂ. ಯೋಜನೆ 18 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ,ಉಪ ಮೇಯರ್ ರಜನೀಶ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮನಪಾ ಸದಸ್ಯರಾದ ಝುಬೈದಾ, ಭಾಸ್ಕರ, ಶಶಿಧರ ಹೆಗ್ಡೆ, ಅಬ್ದುಲ್ ರವೂಫ್, ನವೀನ್ ಡಿಸೋಜ, ಪ್ರವೀಣ ಚಂದ್ರ ಆಳ್ವ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಧರ್ಮ ಗುರುಗಳಾದ ವಂ.ವಿಕ್ಟರ್ ಮೊಚಾದೋ, ಅಬ್ದುಲ್ ರಹ್ಮಾನಿಯಾ ಬಾಂಬಿಲ, ರಾಘವೇಂದ್ರ ಭಟ್ ಮುಂತಾದವರು ಉಪಸ್ಥಿತರಿದ್ದರು.

Comments are closed.