ಮನೋರಂಜನೆ

ಈ ಬಾರಿ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿದ್ದೇಕೆ ಗೊತ್ತೇ…?

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಎರಡನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಸುದೀಪ್ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದು, ಸ್ಯಾಂಡಲ್‍ವುಡ್ ಕ್ರಿಕೆಟ್ ಟೂರ್ನಿಯ ಸಮಾರೋಪದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಸುದೀಪ್ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ, ಈ ಎಲೆಕ್ಷನ್‍ನಲ್ಲಿ ನಮ್ಮ ಪರ ಪ್ರಚಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಕೂಡ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿದ್ದರು. ನಂತರ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್ ವಿಷ್ಣು ಸಮಾಧಿಯ 100 ಎಕರೆ ಜಾಗವನ್ನ ನಾವೇ ಖರೀದಿ ಮಾಡುತ್ತೇನೆ. ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ, ಸಮಾಧಿ ಜಾಗವನ್ನ ಪುಣ್ಯಭೂಮಿ ಅಂತಾ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದೇನೆ. ಭಾರತೀಯರ ಆಸೆಯಂತೆ ಇಲ್ಲಿ ಬದಲಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿ ಎಂದು ಹೇಳಿದ್ದೇನೆ. ಈ ಬಗ್ಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಜೊತೆಗೆ ಪುಣ್ಯಭೂಮಿ ಮಾಡಿಕೊಡೋದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಸುದೀಪ್ ಹೇಳಿದರು.

Comments are closed.