ಮನೋರಂಜನೆ

ಕನ್ನಡದ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂದು ದಿಢೀರನೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Comments are closed.