ಮನೋರಂಜನೆ

ಕುತೂಹಲಕ್ಕೆ ಎಡೆಮಾಡಿಕೊಟ್ಟ ನಟ ಕಿಚ್ಚಾ ಸುದೀಪ್, ಎಚ್ ಡಿಕೆ ಭೇಟಿ! ಸುದೀಪ್ ಜೆಡಿಎಸ್’ಗೆ ಸೇರುತ್ತಾರೆಯೇ..?

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನಟ ಕಿಚ್ಚಾ ಸುದೀಪ್ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರ ನಿವಾಸಕ್ಕೆ ನಟ ಸುದೀಪ್ ಅವರು ಆಗಮಿಸಿದ್ದು, ಸುಮಾರು 2 ಗಂಟೆಗೂ ಅಧಿಕ ಸಮಯ ಚರ್ಚೆ ನಡೆಸಿದ್ದಾರೆ. ಸುದೀಪ್ ಭೇಟಿ ವೇಳೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೂ ಕೂಡ ಇದ್ದರು. ಕುಮಾರಸ್ವಾಮಿ ನಿವಾಸದಲ್ಲೇ ಸುದೀಪ್ ಬೆಳಗಿನ ಉಪಾಹಾರ ಕೂಡ ಸವಿದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಟ ಸುದೀಪ್ ಗೌಡರ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಇನ್ನು ಸುದೀಪ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆಯೇ ಅಥವಾ ಪಕ್ಷಕ್ಕೆ ಸೇರ್ಪಡೆಯಾಗದೇ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜೆಡಿಎಸ್ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂಬ ಅಂಶಗಳ ಕುರಿತು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.

Comments are closed.