ಮನೋರಂಜನೆ

‘ಕಚಡಾ’ ಹೇಳಿಕೆಗೆ ಕ್ಷಮೆ ಯಾಚಿಸಿದ ‘ರಾಜರಥ ಚಿತ್ರದ ಭಂಡಾರಿ ಬ್ರದರ್ಸ್

Pinterest LinkedIn Tumblr


ಬೆಂಗಳೂರು: ನಮ್ಮ ಸಿನಿಮಾ ನೋಡದವರು ‘ಕಚಡಾ ನನ್ಮಕ್ಳು’ ಎಂದು ಪ್ರೇಕ್ಷಕರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜರಥ ಸಿನಿಮಾದ ನಿರ್ದೇಶಕ ಅನೂಪ್​ ಭಂಡಾರಿ ಹಾಗೂ ನಟ ನಿರೂಪ್​ ಭಂಡಾರಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಕ್ಷಮೆ ಯಾಚಿಸಿದ್ದಾರೆ.

‘ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗೂ ನೋವುಂಟು ಮಾಡಿರುವುದಕ್ಕೆ ನಾನು ಕ್ಷಮೆ ಯಾಚಿಸುತ್ತೇವೆ. ಈ ಸಂದರ್ಶನಕ್ಕೂ ಮುಂಚೆ ಹಲವಾರು ಒಳ್ಳೆಯ ಕನ್ನಡ ಸಿನಿಮಾ ಬಂದರು ಕೆಲವರು ಕನ್ನಡ ಸಿನಿಮಾ ನೋಡುವುದಿಲ್ಲ ಎಂಬ ಚರ್ಚೆಗಳಾಗಿತ್ತು. ಈ ಹಿನ್ನೆಲೆಯಲ್ಲಿ ಬಂದ ಆ ಪ್ರಶ್ನೆಗೆ ನಾವು ತಪ್ಪು ಉತ್ತರ ಕೊಟ್ಟಿದ್ದೇವೆ ಇದು ಖಂಡಿತವಾಗಿಯೂ ಕನ್ನಡ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ’ ಎಂದು ಅವರು ಟ್ವೀಟ್​ ಮಾಡುವ ಮೂಲಕ ಕ್ಷಮೆ ಕೋರಿದ್ದಾರೆ.

‘ಕನ್ನಡ ಮತ್ತು ಕನ್ನಡ ಸಿನಿಮಾ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಎನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ’ ಎಂದಿದ್ದಾರೆ.

ಆರ್​ಜೆ ರಾಪಿಡ್ ರಶ್ಮಿ ಟಾಕ್ ಶೋನಲ್ಲಿ ಪ್ರೇಕ್ಷಕರ ಕುರಿತು ‘ಕಚಡಾ’, ‘ಕಚಡಾ ನನ್ಮಕ್ಳು’ ಎಂದು ರಾಜರಥ ಚಿತ್ರದ ನಿರ್ದೇಶಕ ಅನೂಪ್​ ಭಂಡಾರಿ, ನಟಿ ಅವಂತಿಕಾ ಶೆಟ್ಟಿ ಹಾಗೂ ನಟ ನಿರೂಪ್​ ಭಂಡಾರಿ ತಿಳಿಸಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆಗೆ ಗುರಿಯಾಗಿತ್ತು.

Comments are closed.