ಮನೋರಂಜನೆ

ಭಗತ್ ಸಿಂಗ್ ನೇಣಿಗೇರಿದ ಪಾಕಿಸ್ತಾನದ ಸ್ಥಳ ಈಗ ಹೀಗಿದೆ ನೋಡಿ ಎಂದ ರಾಜಮೌಳಿ!

Pinterest LinkedIn Tumblr

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಜಮೌಳಿ ಟ್ವೀಟ್ ಮಾಡಿರುವ ಒಂದು ಫೋಟೋ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ರಾಜಮೌಳಿ ಪಾಕಿಸ್ತಾನದ ಲಾಹೋರ್ ನಲ್ಲಿರುವ ಶಾದ್ಮನ್ ಚೌಕದ ಫೋಟೋವನ್ನು ಟ್ವಿಟ್ ಮಾಡಿದ್ದಾರೆ. ಇದೇ ಸ್ಥಳದಲ್ಲಿ ಭಾರತದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರನ್ನು ಬ್ರಿಟೀಷರು ಗಲ್ಲಿಗೇರಿಸಿದ್ದರೆಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ಅಂತರಾಷ್ಟ್ರೀಯ ಚಿತ್ರ ಪ್ರದರ್ಶನಕ್ಕಾಗಿ ಪಾಕಿಸ್ತಾನಕ್ಕೆ ತೆರಳಿದ್ದ ರಾಜಮೌಳಿ ಅಲ್ಲಿನ ಕರಾಚಿ, ಲಾಹೋರ್, ಇಸ್ಲಾಮಾಬಾದ್ ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಲಾಹೋರ್ ನಗರದ ಈ ಚೌಕದೊಡನೆ ಭಾರತದ ನಂಟನ್ನು ಕುರಿತಂತೆ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇಂದು ಆ ಸ್ಥಳದ ಮಹತ್ವ ಸಾರುವ ಯಾವ ಕುರುಹುಗಳೂ ಅಲ್ಲಿಲ್ಲ ಎಂದೂ ಅವರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಮೌಳಿ ಭಾಗವಹಿಸಿದ್ದರು.

Comments are closed.