ಮನೋರಂಜನೆ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟಿ ಜಯಂತಿ

Pinterest LinkedIn Tumblr

ಬೆಂಗಳೂರು: ಕನ್ನಡದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ವಿಕ್ರಂ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಚ್ ಆಗಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ವಿಕ್ರಂ ಆಸ್ಪತ್ರೆಯ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡಿರುವುದಕ್ಕೆ ನಾನಿಂದು ಗುಣಮುಖಳಾಗಿ ಇಂದು ನಿಮ್ಮ ಮುಂದೆ ಕುಳಿತಿದ್ದೇನೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಜಯಂತಿ ಸುದ್ದಿಗಾರರ ಮುಂದೆ ಹೇಳಿದರು.

ಬೇರೆ ಭಾಷೆಯ ಚಾನೆಲ್ ಗಳು ನನ್ನ ಆರೋಗ್ಯದ ಬಗ್ಗೆ ಏನೇನೋ ವಿಷಯಗಳನ್ನು ಸುಳ್ಳು ವದಂತಿಗಳನ್ನು ಹಬ್ಬಿಸಿದವು. ಆದರೆ ಕನ್ನಡ ಮಾಧ್ಯಮಗಳು ಮತ್ತು ಟಿವಿ ಚಾನೆಲ್ ಗಳು ಬಹಳ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇಂದು ನನಗೆ ಕನ್ನಡ ಮಾಧ್ಯಮಗಳ ಮುಂದೆ ಮಾತನಾಡಲು ಧೈರ್ಯ ಬಂದಿದೆ ಎಂದು ಜಯಂತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಸಿರಾಟದ ತೊಂದರೆಯಿಂದ ಕಳೆದ 12 ದಿನಗಳ ಹಿಂದೆ ವಿಕ್ರಂ ಆಸ್ಪತ್ರೆಯಲ್ಲಿ ಜಯಂತಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ವಿಕ್ರಂ ಆಸ್ಪತ್ರೆ ಮೂಲಗಳು ತಿಳಿಸಿವೆ.

Comments are closed.