ಮನೋರಂಜನೆ

ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ : ಹೇಮ ಮಾಲಿನಿ

Pinterest LinkedIn Tumblr

ನವದೆಹಲಿ: ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದು ಬಿಜೆಪಿ ಸಂಸದೆ ಹೇಮ ಮಾಲಿನಿ ಅಭಿಪ್ರಾಯಪಟ್ಟಿದ್ದಾರೆ.

ಹಿಂದೆಯೂ ಇಂತಹ ಪ್ರಕರಣಗಳು ನಡೆಯುತ್ತಿದ್ದಿರಬಹುದು, ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. ದೌರ್ಜನ್ಯಗಳು ಹೆಚ್ಚುವುದಕ್ಕೆ ಇದೂ ಒಂದು ಕಾರಣವಿರಬಹುದು ಈ ರೀತಿಯ ಪ್ರಕರಾಣಗಳು ನಡೆಯಬಾರದು, ಇದರಿಂದಾಗಿ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಮ ಮಾಲಿನಿ ಹೇಳಿದ್ದಾರೆ.

ಹೇಮ ಮಾಲಿನಿ ಎಎನ್ಐ ಗೆ ಈ ಹೇಳಿಕೆ ನೀಡಿದ್ದು, ಮಹಿಳೆಯರು ಹಾಗೂ ಅಪ್ರಾಪ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಾಣಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ.

Comments are closed.