ಮನೋರಂಜನೆ

ನಾನು ಸ್ಪರ್ಧಿಸುವುದಿಲ್ಲ: ರಮ್ಯಾ

Pinterest LinkedIn Tumblr


ಮಂಡ್ಯ : ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲವೆಂದು ನಟಿ, ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ.

ತಮ್ಮನ್ನು ಸಂಪುಟದಿಂದ ಕೈ ಬಿಟ್ಟ ಕಾರಣಕ್ಕೆ ನಟ, ಶಾಸಕ ಅಂಬರೀಶ್ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಅವರ ಬದಲಿಗೆ ನಟಿ ರಮ್ಯಾ ಸ್ಪರ್ಧಿಸಲಿದ್ದಾರೆಂದು ಅನಿಲ್ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದರು. ಇದಕ್ಕೆ ರೀಟ್ವೀಟ್ ಮಾಡಿರುವ ರಮ್ಯಾ ತಾವು ಸ್ಪರ್ಧೆ ಮಾಡುತ್ತಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಅಂಬರೀಶ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಪ್ರಕಟಿಸಿದ್ದರೂ ಅವರು ಇನ್ನೂ ‘ಬಿ’ ಫಾರಂ ತೆಗೆದುಕೊಂಡಿಲ್ಲ. ಅಂಬರೀಶ್‌ ಅವರ ಮನವೊಲಿಸಲು ಕಾಂಗ್ರೆಸ್‌ ಮುಖಂಡರ ಪ್ರಯತ್ನ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.

Comments are closed.