ಮನೋರಂಜನೆ

ಬಿಎಸ್‌ವೈ ಭೇಟಿಯಾಗಿ ಮಾತುಕತೆ ನಡೆಸಿದ ನಟಿ ಭಾವನಾ!

Pinterest LinkedIn Tumblr


ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿದ್ದ ನಟಿ ಭಾವನಾ ಟಿಕೆಟ್‌ ಸಿಗದ ಕಾರಣಕ್ಕೆ ತೀವ್ರ ಅಸಮಾಧಾನಕ್ಕೊಳಗಾಗಿದ್ದು, ಶುಕ್ರವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಮತ್ತು ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಭಾವನಾ ಅವರು ಚಿತ್ರದುರ್ಗದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು, ಆದರೆ ಟಿಕೆಟ್‌ ಸಿಗದ ಹಿನ್ನಲೆಯಲ್ಲಿ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದರು.

-Udayavani

Comments are closed.