ಮನೋರಂಜನೆ

ನಟ ಚಿಕ್ಕಣ್ಣ ಬೆಂಗಳೂರಿನಿಂದ ಮೈಸೂರಿಗೆ ಹೋದರು ಮತದಾನ ಮಾಡಲು ಆಗಲಿಲ್ಲ !

Pinterest LinkedIn Tumblr

ಮೈಸೂರು: ಮತದಾನದ ಹಕ್ಕಿನಿಂದ ಹಾಸ್ಯನಟ ಚಿಕ್ಕಣ್ಣ ವಂಚಿತರಾಗಿದ್ದಾರೆ. ಚಿಕ್ಕಣ್ಣ ಮೈಸೂರಿನ ಬಲ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಅಲ್ಲದೇ ಹುಟ್ಟೂರಿನಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಂಡಿದ್ದರು. ಮತದಾನಕ್ಕಾಗಿ ಬೆಂಗಳೂರಿನಿಂದ ಮೈಸೂರಿಗೂ ಕೂಡ ಆಗಮಿಸಿದ್ದರು.

ಚಿಕ್ಕಣ್ಣ ಇಂದು ಮತಗಟ್ಟೆಗೆ ಭೇಟಿ ನೀಡಿದಾಗ ತನ್ನ ಹೆಸರಿನ ಮೇಲೆ ಡಿಲೀಟ್ ಎಂದು ಉಲ್ಲೇಖಿಸಿದ್ದಾರೆ. ವಾಸವಿಲ್ಲದ ಕಾರಣ ಡಿಲೀಟ್ ಆಗಿದೆ ಎಂದು ಮತಗಟ್ಟೆ ಸಿಬ್ಬಂದಿಗಳು ಸಬೂಬು ಹೇಳಿದ್ದಾರೆ. ಅಲ್ಲದೇ ಗ್ರಾಮದ ಹಲವರ ಹೆಸರನ್ನು ಡಿಲೀಟ್ ಮಾಡಿರುವ ಬಗ್ಗೆ ಆರೋಪಿಸಿದ್ದಾರೆ.

ಕೊನೆಗೂ ಚಿಕ್ಕಣ ತಮ್ಮ ಮತದಾನ ಮಾಡದೆ ವಾಪಸ್ ಆಗಿದ್ದಾರೆ. ಚಿಕ್ಕಣ್ಣ ಮತದಾನಕ್ಕಾಗಿಯೇ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದರು ಆದರೆ ಈಗ ಬೇಸರದಿಂದ ವಾಪಸ್ ಆಗಿದ್ದಾರೆ.

Comments are closed.