ಮನೋರಂಜನೆ

ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತದಿಂದ ಪಾರಾದ ಸಂಸದೆ ಹೇಮ ಮಾಲಿನಿ

Pinterest LinkedIn Tumblr

ಮಥುರಾ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮಥುರಾ ಸಂಸದೆಯಾಗಿರುವ ಹೇಮಾ ಮಾಲಿನಿ ಇಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದಾಗ ಭಾರೀ ಮಳೆಗೆ ಮರವೊಂದು ಅವರ ಬೆಂಗಾವಲು ಪಡೆ ವಾಹನದ ಮೇಲೆ ಉರುಳಿ ಬಿದ್ದಿದೆ.

ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರೀ ಗುಡುಗು ಸಹಿತ ಮಳೆಯಾಗಿತ್ತಿದೆ. ಇದರಿಂದಾಗಿ ರಾಜ್ಯಾದ್ಯಂತ 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಅದೃಷ್ಟವಶಾತ್ ಹೇಮಾ ಮಾಲಿನಿ ಅಪಘಾತದಿಂದ ಬಚಾವಾಗಿದ್ದಾರೆ.

Comments are closed.