ಮನೋರಂಜನೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಕ್ಷಯ್, ಖೇರ್, ನಾನಾ ಪಾಟೇಕರನ್ನು ಕಣಕ್ಕಿಳಿಸಲು ಮುಂದಾಗಿರುವ ಬಿಜೆಪಿ

Pinterest LinkedIn Tumblr

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್, ಕ್ರೀಡಾ ಕ್ಷೇತ್ರದಲ್ಲಿ ಗಣ್ಯರಿಗೆ ಟಿಕೆಟ್ ನೀಡಲು ಬಿಜೆಪಿ ಇರಾದೆ ಹೊಂದಿದೆ.

ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅನುಪಮ್ ಖೇರ್, ನಾನಾ ಪಾಟೇಕರ್ ಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ. ಪಂಜಾಬ್ ಅಥವಾ ದೆಹಲಿಯಲ್ಲಿ ಅಕ್ಷಯ್ ಕುಮಾರ್, ಮಹಾರಾಷ್ಟ್ರದಲ್ಲಿ ಪಾಟೇಕರ್ ಮತ್ತು ನವದೆಹಲಿಯಲ್ಲಿ ಅನುಪಮ್ ಖೇರ್ ಅವರನ್ನು ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ ಎಂದು ಬಿಜೆಪಿಯ ಮುಖಂಡರೊಬ್ಬರು ಪತ್ರಿಕೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.

ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತಾಗಿ ಇತರ ರಾಜ್ಯಗಳಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲ. ಹೀಗಾಗಿ ಇಲ್ಲಿ ಸಿನಿಮಾ ಕ್ಷೇತ್ರದ ಸೇರಿದಂತೆ ಇನ್ನಿತರ ಕ್ಷೇತ್ರಗಳ ಪ್ರಮುಖರನ್ನು ಕಣಕ್ಕಿಳಿಸಲು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ.

ಹಾಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 282 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ 232 ಸ್ಥಾನಗಳನ್ನು ಉತ್ತರ ಪ್ರದೇಶ, ಬಿಹಾರ, ಗುಜರಾತ್, ರಾಜಸ್ತಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ಗಳಿಂದಲೇ ಗೆದ್ದುಕೊಂಡಿತ್ತು. ಮುಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಯೋಜಿಸುತ್ತಿದೆ.

Comments are closed.