ಮನೋರಂಜನೆ

ಕಿಕಿ ಡ್ಯಾನ್ಸ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಬಿಗ್‌ಬಾಸ್ ಸ್ಪರ್ಧಿ ನಿವೇದಿತಾ ಗೌಡ

Pinterest LinkedIn Tumblr

ಎಲ್ಲೆಡೆ ಇದೀಗ ಕಿಕಿ ಚಾಲೆಂಜ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಇದೀಗ ಬಿಗ್‌ಬಾಸ್ ಸ್ಪರ್ಧಿ ನಿವೇದಿತಾ ಗೌಡ ಕಿಕಿ ಡ್ಯಾನ್ಸ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಇತ್ತೀಚೆಗಷ್ಟೆ ಬಾಲಿವುಡ್ ನಟಿಯರಾದ ಅದಾ ಶರ್ಮಾ ಹಾಗೂ ನೋರಾ ಫತೇಹಿ ಕಿಕಿ ಡ್ಯಾನ್ಸ್ ಮಾಡಿ ವಿಡಿಯೋವನ್ನು ಶೇರ್ ಮಾಡಿದ್ದರು. ಇದೀಗ ಕಿಕಿ ಚಾಲೆಂಜ್ ಸ್ವೀಕರಿಸಿದ್ದ ನಿವೇದಿತಾ ಗೌಡ ಓಡುವ ಕಾರಿನಿಂದ ಇಳಿದು ಹೆಜ್ಜೆ ಹಾಕಿದ್ದಾರೆ.

ನಿವೇದಿತಾ ಕಿಕಿ ಚಾಲೆಂಜ್ ಗಾಗಿ ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದು ಬೇಬಿ ಡಾಲ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಚಾಲೆಂಜ್ ಸ್ವೀಕರಿಸಿದ್ದಕ್ಕೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಕಿಕಿ ಡ್ಯಾನ್ಸ್ ಮಾಡಿರುವ ನಿವೇದಿತಾ ಗೌಡ ಅವರು ತಮ್ಮ ಅಭಿಮಾನಿಗಳಿಗೆ ನಾನು ಖಾಲಿ ರಸ್ತೆಯಲ್ಲಿ ಕಿಕಿ ಡ್ಯಾನ್ಸ್ ಮಾಡಿದ್ದು ಏನು ತೊಂದರೆಯಾಗಿಲ್ಲ. ಆದರೆ ಕಿಕಿ ಡ್ಯಾನ್ಸ್ ಚಾಲೆಂಜ್ ಅನ್ನು ಸ್ವೀಕರಿಸಬೇಡಿ ಎಂದು ಮನವಿ ಮಾಡಿದ್ದಾರೆ.

Comments are closed.