ಮನೋರಂಜನೆ

ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿದ ಬಿಗ್‌ಬಾಸ್ ಸ್ಪರ್ಧಿ ನಿವೇದಿತಾ ಗೌಡ ವಿರುದ್ಧ ಪೊಲೀಸ್ ದೂರು ದಾಖಲು !

Pinterest LinkedIn Tumblr

ಬೆಂಗಳೂರು: ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಿಗ್‌ಬಾಸ್ ಸ್ಪರ್ಧಿ ನಿವೇದಿತಾ ಗೌಡ ವಿರುದ್ಧ ಇದೀಗ ದೂರು ದಾಖಲಿಸಲಾಗಿದೆ.

ನಿವೇದಿತಾ ಕಿಕಿ ಚಾಲೆಂಜ್ ಗಾಗಿ ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದು ಬೇಬಿ ಡಾಲ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಚಾಲೆಂಜ್ ಸ್ವೀಕರಿಸಿದ್ದಕ್ಕೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡುವ ಮೂಲಕ ಪ್ರಚೋದಿಸುತ್ತಿದ್ದಾರೆ ಎಂದು ಕನ್ನಡ ಒಕ್ಕೂಟ ಸಂಘಟನೆ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರ ಎಚ್ಚರಿಕೆ ನೀಡಿದ್ದರು ಅದನ್ನು ಉಲ್ಲಂಘಿಸಿ ಕಿಕಿ ಡ್ಯಾನ್ಸ್ ಮಾಡಿರುವ ನಿವೇದಿತಾ ಗೌಡ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕನ್ನಡ ಚಳವಳಿ ನಾಗೇಶ್ ತಮ್ಮ ದೂರಿನಲ್ಲಿ ಮನವಿ ಮಾಡಿದ್ದಾರೆ.

Comments are closed.