ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿರುವ ರಕ್ಷಿತ್ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಸ್ಯಾಂಡಲ್‍ವುಡ್‍ಗೆ ಎಂಟ್ರಿ ನೀಡುತ್ತಿದ್ದಾರೆ.
ಮಹೇಶ ಪಾತ್ರಧಾರಿಯ ರಕ್ಷಿತ್ ಈಗ ರಕ್ಷ್ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಈಗಾಗಲೇ ರಕ್ಷಿತ್ ಶೆಟ್ಟಿ ಇರುವುದರ ಕಾರಣ ಅವರು ತಮ್ಮ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದಾರೆ.
8ಎಂಎಂ ಚಿತ್ರದ ನಿರ್ದೇಶಕರಾದ ಹರಿಕೃಷ್ಣ ರಕ್ಷ್ ಅವರ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ರೆಡ್’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ರಕ್ಷ್ ಹ್ಯಾಕರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷ್‍ಗೆ ನಾಯಕಿಯಾಗಿ ಸೋನು ಗೌಡ ಮಿಲಿಟರಿ ಆಫಿಸರ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.
ಸದ್ಯ ಶುಕ್ರವಾರ ರೆಡ್ ಸಿನಿಮಾದ ಮುಹೂರ್ತ ನಡೆಯಲಿದೆ. ಅಲ್ಲದೇ ಈ ಚಿತ್ರದಲ್ಲಿ ಮತ್ತೊಬ್ಬರು ನಾಯಕಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮತ್ತೊಬ್ಬ ನಾಯಕಿ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಜುದಾ ಸ್ಯಾಂಡಿ ಸಂಗೀತ ನೀಡುತ್ತಿದ್ದಾರೆ.
Comments are closed.