ಮನೋರಂಜನೆ

ನಂಜುಂಡಿ ಕಲ್ಯಾಣ ನಿರ್ದೇಶಕ ಎಂ.ಎಸ್ ರಾಜಶೇಖರ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನ

Pinterest LinkedIn Tumblr


ಬೆಂಗಳೂರು: ಹಿರಿಯ ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶರಾಗಿದ್ದಾರೆ.

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ರಾಜಶೇಖರ್ ಅವರು ನಿಧನರಾಗಿದ್ದಾರೆ. ರಾಜ ಶೇಖರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ರಾಜಶೇಖರ್ ಅವರು ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಸ್ಯಾಂಡಲ್ ವುಡ್ ನಲ್ಲಿ ಸೃಜನಶೀಲ ನಿರ್ದೇಶಕ ಎಂದೇ ಕರೆಸಿಕೊಂಡಿದ್ದರು. ಆದರೆ ಇಂದು ರಾಜಶೇಖರ್ ಎಲ್ಲರನ್ನು ಅಗಲಿ ಹೋಗಿದ್ದಾರೆ.

ಅನುರಾಗ ಅರಳಿತು, ನಂಜುಂಡಿ ಕಲ್ಯಾಣ, ಗಜಪತಿ ಗರ್ವಭಂಗ, ರಥಸಪ್ತಮಿ, ಮನಮೆಚ್ಚಿದ ಹುಡುಗಿ, ನಂತಹ ಸ್ಟಾರ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

Comments are closed.