ಬೆಂಗಳೂರು: ಕೊನೆಗೂ ಸಿಲಿಕಾನ್ ಸಿಟಿಗೆ ಹಾಟ್ ಬೆಡಗಿ ಸನ್ನಿ ಲಿಯೋನ್ ಆಗಮಿಸುತ್ತಿದ್ದಾರೆ. ದಿ ಟೈಮ್ ಕ್ರಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಫ್ಯೂಷನ್ ಲೈಟ್ಸ್ ಕಾರ್ಯಕ್ರಮದಲ್ಲಿ ಸನ್ನಿ ಭಾಗಿಯಾಗಲಿದ್ದಾರೆ.
ನವೆಂಬರ್ 3ರಂದು ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ `ವೈಟ್ ಆರ್ಕಿಡ್’ ಸಭಾಂಗಣದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕನ್ನಡದ ಖ್ಯಾತ ಗಾಯಕ ರಘು ದೀಕ್ಷಿತ್ ಮತ್ತು ಖ್ಯಾತ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾಗಿಯಾಗಲಿದ್ದಾರೆ. ಸನ್ನಿ ಮತ್ತು ರಘು ದೀಕ್ಷಿತ್ ಟೀಂ ಕನ್ನಡ ಮತ್ತು ಬಾಲಿ ಕಾನ್ಸರ್ಟ್ ನಲ್ಲಿ ಮನೋರಂಜನಾ ಪ್ರದರ್ಶನ ನೀಡಲಿದ್ದಾರೆ.
ಈ ಕಾರ್ಯಕ್ರಮ ಆಯೋಜಕ ಹರೀಶ್ ಮಾತನಾಡಿ, ಕಾರ್ಯಕ್ರಮ ಆಯೋಜನೆ ಮಾಡುವ ಮೊದಲೇ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರಾದ ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಬಳಿ ಮಾತನಾಡಿದ್ದೇವೆ. ಈ ಕಾರ್ಯಕ್ರಮದ ಬಗ್ಗೆ ತಿಳಿಸಿದ್ದೀವಿ. ಅದಕ್ಕೆ ಅವರು ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಉಳಿದ ಕೆಲ ಯುವ ಸಂಘಟನೆಗಳು ವಿರೋಧಿಸುತ್ತಿವೆ. ಈ ರೀತಿ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಬಿಗ್ ಬಾಸ್ ಖ್ಯಾತಿಯ ನಯಾಝ್ ಮಾಡಲಿದ್ದಾರೆ. ಸನ್ನಿ ಕಾರ್ಯಕ್ರಮಕ್ಕೆ ಕೆಲ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿದ್ದು, ನಾಳೆ ಯಾವುದು ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ. ಸನ್ನಿಗೆ ಕಪ್ಪು ಮಸಿಯನ್ನು ಬಳಿಯುತ್ತೇವೆ ಎಂದು ಎಚ್ಚರಿಕೆ ನೀಡಿವೆ.
Comments are closed.