
ಬೆಂಗಳೂರು: ಮೀ ಟೂ ಆರೋಪಕ್ಕೆ ಸಿಲುಕಿರುವ ನಟ ಅರ್ಜುನ್ ಸರ್ಜಾ ಅವರಿಗೆ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದಾರೆ.
ಸೋಮವಾರ ಠಾಣೆಗೆ ಬಂದು ವಿಚಾರಣೆ ಎದುರಿಸಬೇಕು ಎಂದು ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.
ಶ್ರುತಿ ಹರಿಹರನ್ ಅವರು ನೀಡಿದ ದೂರಿನಂತೆ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಾಳೆ ಅರ್ಜುನ್ ಅವರು ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸುತ್ತಾರಾ ಎನ್ನುವ ಕುತೂಹಲ ಎಲ್ಲರದ್ದಾಗಿದೆ.
Comments are closed.