ಮನೋರಂಜನೆ

ಕೀರ್ತಿಗೌಡ ಮೇಲಿನ ಹಲ್ಲೆ ಪ್ರಕರಣ: ದುನಿಯಾ ವಿಜಿ ಪತ್ನಿ ನಾಗರತ್ನಗೆ ನಿರೀಕ್ಷಣಾ ಜಾಮೀನು ಮಂಜೂರು

Pinterest LinkedIn Tumblr


ಬೆಂಗಳೂರು: ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ನಾಗರತ್ನ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಗರದ ಸೆಷನ್ಸ್ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದಿದೆ.

ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಹಾಗೂ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ.5 ರಂದು ನಗರದ ಸಿಟಿ ಸಿವಿಲ್ ಕೋರ್ಟ್ ನಾಗರತ್ನಗೆ 50 ಸಾವಿರ ರೂ. ಬಾಂಡ್ ಷರತ್ತು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಏನಿದು ಪ್ರಕರಣ?
ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಬಳಿಕ ನಾಗರತ್ನ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದರು. ಗಿರಿನಗರ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸಿದ್ದರೂ ಬಂಧಿಸುವಲ್ಲಿ ವಿಫಲವಾಗಿದ್ದರು. ಕೀರ್ತಿಗೌಡ ಅವರು ತಮ್ಮ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ನಾಗರತ್ನ ಅವರ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿತ್ತು. ಹಲ್ಲೆ ವಿಡಿಯೋ ಲಭ್ಯವಾಗುವುದಕ್ಕೂ ಮೊದಲು ಕೀರ್ತಿ ಅವರು ದೂರು ದಾಖಲಿಸಿದ್ದರು. ಆದರೆ ಆ ವೇಳೆ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಮಾತ್ರ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹೆಚ್ಚುವರಿಯಾಗಿ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದರು.

Comments are closed.