ಮನೋರಂಜನೆ

ಅಂಬರೀಷ್‌ ಅಂತ್ಯಕ್ರಿಯೆ ಸೋಮವಾರ: ಮುಖ್ಯಮಂತ್ರಿ ಕುಮಾರಸ್ವಾಮಿ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ, ಹಿರಿಯ ಚಲನಚಿತ್ರ ನಟ ಅಂಬರೀಶ್ ಅಂತ್ಯಕ್ರಿಯೆ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಜರುಗಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬ ಸದಸ್ಯರ ಜತೆ ಚರ್ಚಿಸಿ, ಸಲಹೆ ಸೂಚನೆ ಪಡೆದು ಕ್ರಮ ಕೈಗೊಳ್ಳಲಾಗಿದೆ ಎಂದರು.

ಭಾನುವಾರ ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗುತ್ತಿದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.

ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಂಬಿ ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಬಿಗಿ ಬಂದೋಬಸ್ತ್‌ ಕೂಡ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Comments are closed.