ಮನೋರಂಜನೆ

ಈ ವಾರ ಬಹುನಿರೀಕ್ಷಿತ `ಕೆಜಿಎಫ್’ ಸಿನಿಮಾ ರಿಲೀಸ್: ಕೊಲ್ಲೂರು, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಯಶ್ ಭೇಟಿ

Pinterest LinkedIn Tumblr


ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವಾರ ಬಹುನಿರೀಕ್ಷಿತ `ಕೆಜಿಎಫ್’ ಸಿನಿಮಾ ರಿಲೀಸ್ ಹಿನ್ನೆಲೆಯಲ್ಲಿ ಯಶ್ ಚಿತ್ರತಂಡದ ಜೊತೆ ಸೇರಿ ದೇವಸ್ಥಾನಗಳಿಗೆ ಭೇಟಿ ಮಾಡುತ್ತಿದ್ದಾರೆ. ನಟ ಯಶ್ ಮತ್ತು ಚಿತ್ರತಂಡ ಬೆಂಗಳೂರಿನಿಂದ ಹೊರಟು ಮೊದಲು ಕೊಲ್ಲೂರು ದೇವಸ್ಥಾನ ನಂತರ ಧರ್ಮಸ್ಥಳ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಉಜಿರೆಯಲ್ಲಿರೋ ಪ್ರಸಿದ್ಧ ಸುರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೊಲ್ಲೂರು ದೇವಸ್ಥಾನಕ್ಕೆ ನಟ ಯಶ್ ಭೇಟಿ

ಯಶ್ ಹೆಲಿಕಾಫ್ಟರ್ ನಿಂದ ಕೊಲ್ಲೂರಿಗೆ ಬಂದು ನೇರವಾಗಿ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು ನಂತರ ಧರ್ಮಸ್ಥಳ, ಕುಕ್ಕೆಗೆ ಭೇಟಿ ನೀಡಿದ್ದಾರೆ. ತಂದೆಯಾದ ಬಳಿಕ ಯಶ್ ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಕೆಜಿಎಫ್ ಚಿತ್ರದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿದ್ದು, ಯಶ್, ನಿರ್ಮಾಪಕ ವಿಜಯ್ ಕಿರಗಂದೂರ್ ಸ್ನೇಹಿತರ ಜೊತೆ ಸೇರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದೇ ವಾರ 21ರಂದು ಕೆಜಿಎಫ್ ಸಿನಿಮಾ ರಿಲೀಸ್ ಆಗಲಿದೆ. ಹೀಗಾಗಿ ಚಿತ್ರದ ಒಳಿತಿಗಾಗಿ ಕೆಜಿಎಫ್ ಟೀಮ್ ದೇವಸ್ಥಾನಕ್ಕೆ ಭೇಟಿ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

‘ಕೆಜಿಎಫ್’ ಸಿನಿಮಾದ ಹಿಂದಿಯ ಸ್ಪೆಷಲ್ ಹಾಡೊಂದು ಈಗಾಗಲೇ ರಿಲೀಸ್ ಆಗಿದ್ದು, ಮೌನಿ ರಾಯ್ ಹಾಗೂ ಯಶ್ ‘ಗಲಿ ಗಲಿ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ಹಾಡು ಹೊಸ ದಾಖಲೆಯನ್ನು ನಿರ್ಮಿಸಿದೆ. ಕಳೆದ ಬುಧವಾರ ಕೆಜಿಎಫ್ ಸಿನಿಮಾದ ‘ಗಲಿ ಗಲಿ’ ಹಾಡು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಈ ಹಾಡು 13 ಮಿಲಿಯನ್ ವ್ಯೂ ಪಡೆದುಕೊಂಡಿದೆ. ವಿಶ್ವದ ಯಾವ ಸಿನಿಮಾ ಹಾಡು ಕೂಡ ಒಂದು ದಿನಕ್ಕೆ ಈ ಮಟ್ಟಿನ ಹಿಟ್ಸ್ ಪಡೆದುಕೊಂಡಿಲ್ಲ. ಈಗ ಕೆಜಿಎಫ್ ಚಿತ್ರದ ಈ ಹಾಡು ಬಿಡುಗಡೆಯಾಗಿ ಹೊಸ ದಾಖಲೆ ಸೃಷ್ಟಿಸಿದೆ.

Comments are closed.