ಮನೋರಂಜನೆ

ಪೋರ್ನ್ ಸ್ಟಾರ್ ಆದ ನಟಿ ರಮ್ಯಾಕೃಷ್ಣ

Pinterest LinkedIn Tumblr


ಚೆನ್ನೈ: ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ ರಮ್ಯಾಕೃಷ್ಣ ಈಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ರಮ್ಯಾಕೃಷ್ಣ ಮೊದಲ ಬಾರಿಗೆ ಪೋರ್ನ್ ಸ್ಟಾರ್ ಆಗಿ ನಟಿಸುತ್ತಿದ್ದಾರೆ.

ತಮಿಳಿನಲ್ಲಿ ತ್ಯಾಗರಾಜನ್ ಕುಮಾರರಾಜ್ ನಿರ್ದೇಶನ ಮಾಡುತ್ತಿರುವ ‘ಸೂಪರ್ ಡಿಲೆಕ್ಸ್’ ಚಿತ್ರದಲ್ಲಿ ರಮ್ಯಾಕೃಷ್ಣ ಮೊದಲ ಬಾರಿಗೆ ನೀಲಿತಾರೆ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಲೀಲಾ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ರಮ್ಯಾಕೃಷ್ಣ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿ, “ನನಗೆ ಈ ಪಾತ್ರ ಮಾಡುವಾಗ ಮೊದಲು ತುಂಬಾ ಮುಜುಗರ ಆಯಿತು. ಈ ಪಾತ್ರ ತುಂಬಾ ಚಾಲೆಂಜಿಂಗ್ ಆಗಿದೆ. ಏಕೆಂದರೆ ಈ ಚಿತ್ರದ ಕಥೆಯಲ್ಲಿ ತುಂಬಾ ತಾಕತ್ ಇದೆ. ನಾನು ಈ ಪಾತ್ರವನ್ನು ಹಣಕ್ಕಾಗಿ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಚಿತ್ರದ ಸೀನ್‍ವೊಂದು ಓಕೆ ಮಾಡಲು ನಿರ್ದೇಶಕರಿಗಾಗಿ ನಾನು ಎರಡು ದಿನ ಬರೋಬ್ಬರಿ 37 ರೀ-ಟೇಕ್ ತೆಗೆದುಕೊಂಡಿದ್ದೇನೆ. ನಾನು ರೀ-ಟೇಕ್ ತೆಗೆದುಕೊಂಡು ಅಭಿನಯಿಸುವಾಗ ಅಲ್ಲಿದ್ದ ಸಹಾಯಕರು ಅದನ್ನು ನೋಡಿ ಆಶ್ಚರ್ಯಪಟ್ಟರು ಎಂದರು.

ಈ ಚಿತ್ರದ ಪಾತ್ರಕ್ಕಾಗಿ ರಮ್ಯಾಕೃಷ್ಣ ಅವರ ಬದಲು ಹಿರಿಯ ನಟಿ ನಾದಿಯಾ ಅವರನ್ನು ಸಂಪರ್ಕಿಸಲಾಗಿತ್ತು. ಬಳಿಕ ಈ ಪಾತ್ರಕ್ಕೆ ರಮ್ಯಾಕೃಷ್ಣ ಅವರೇ ಸೂಕ್ತ ಎಂದು ಸ್ವತಃ ಚಿತ್ರದ ನಿರ್ದೇಶಕ ತ್ಯಾಗರಾಜನ್ ಕುಮಾರರಾಜ್ ಹೇಳಿದ್ದಾರೆ.

ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಇದೇ ತಿಂಗಳು 29ರಂದು ಬಿಡುಗಡೆಯಾಗಲಿದೆ.

Comments are closed.