ಮನೋರಂಜನೆ

ರಾಜರಾಜೇಶ್ವರಿನಗರದಲ್ಲಿರುವ ದರ್ಶನ್ ಮನೆ-ಕಚೇರಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ

Pinterest LinkedIn Tumblr

ರಾಜರಾಜೇಶ್ವರಿನಗರ(ಬೆಂಗಳೂರು): ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತ್ತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುತ್ತಿದ್ದು ಅವರ ಬೆಂಬಲಕ್ಕೆ ನಿಲ್ಲುವ ಮೂಲಕ ನಟ ದರ್ಶನ್ ಅವರು ಜೆಡಿಎಸ್ ವಿರುದ್ಧ ತೊಡೆ ತಟ್ಟಿದ್ದು ಇದರ ಬೆನ್ನಲ್ಲೇ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ರಾಜರಾಜೇಶ್ವರಿನಗರದಲ್ಲಿರುವ ದರ್ಶನ್ ಮನೆ ಮೇಲೆ ಹಾಗೂ ಕಚೇರಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ದರ್ಶನ್ ಅವರ ಕಾರು ಮತ್ತು ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ.

ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ದರ್ಶನ್ ಅವರ ಮನೆ ಮೇಲೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Comments are closed.