ಮನೋರಂಜನೆ

ಚಿತ್ರ ತಾರೆಯರಾದ ಸುಮಲತಾ, ದರ್ಶನ್, ಯಶ್ ಗೆ ಸಿಆರ್ ಪಿಎಫ್ ಭದ್ರತೆ ಕೋರಿ ಕೇಂದ್ರಕ್ಕೆ ಬಿಜೆಪಿ ಪತ್ರ

Pinterest LinkedIn Tumblr


ಬೆಂಗಳೂರು: ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಅವರ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ರಾಜ್ಯ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಅವರು . ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದು, ತಮ್ಮ ಮನೆ ಬಳಿ ಗುಪ್ತಚರ ಇಲಾಖೆ ಪೊಲೀಸ್ ಅಧಿಕಾರಿಗಳನ್ನು ಬಿಡಲಾಗಿದೆ. ನಮಗೆ ಭದ್ರತೆ ಬಗ್ಗೆ ಆತಂಕ ಎದುರಾಗಿದೆ. ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದ್ದರು.
ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿ ಬೆಂಬಲ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಅವರು, ಸುಮಲತಾ, ಅವರ ಪುತ್ರ ಅಭಿಷೇಕ್, ದರ್ಶನ್ ಹಾಗೂ ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ವಿರುದ್ಧ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಗೂಂಡಾಗಳು ದರ್ಶನ್ ಅವರ ಮನೆ ಮೇಲೆ ದಾಳಿ ಮಾಡಿದ್ದರು ಎಂದು ಅರವಿಂದ್ ಲಿಂಬಾವಳಿ ಅವರು ವಾಗ್ದಾಳಿ ನಡೆಸಿದರು.

Comments are closed.