ಮನೋರಂಜನೆ

ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ಅಡಚಣೆ

Pinterest LinkedIn Tumblr

ಮೈಸೂರು: ನ್ಯಾಯಾಲಯದಿಂದಲೇ ಹಸಿರು ನಿಶಾನೆ ದೊರಕಿದ್ದರೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ಅಡಚಣೆ ಉಂಟಾಗಿದೆ

ಸ್ಮಾರಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರೈತರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿದ್ದ ಪ್ರಕರಣ ಇತ್ಯರ್ಥವಾಗಿ, ಸ್ಮಾರಕ ನಿರ್ಮಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಾಲೂಕಿನ ಜಯಪುರ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಗೊಂಡಿತ್ತು. ಆದರೆ, ಮಂಗಳವಾರ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕಾಗಮಿಸಿದ ಕೆಲ ಸ್ಥಳೀಯ ರೈತರು ಕಾಮಗಾರಿಗೆ ಅಡ್ಡಿಯುಂಟು ಮಾಡಿದ್ದಾರೆ. ಸ್ಮಾರಕ ನಿರ್ಮಾಣ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 2017ರಲ್ಲಿ 5 ಎಕರೆ ಭೂಮಿ ನಿಗದಿಪಡಿಸಿತ್ತು. ಈ ಸಂಬಂಧ ಸರ್ಕಾರದ ನಿರ್ಧಾರ ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಸ್ಥಳೀಯ ನ್ಯಾಯಾಲಯ ತಡೆ ಯಾಜ್ಞೆ ನೀಡಿತ್ತು. ಕೋರ್ಟ್‌ನಿಂದ ತಡೆಯಾಜ್ಞೆ ತಂದವರು ನಾಲ್ಕು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿತ್ತು.

Comments are closed.