ಅಂತರಾಷ್ಟ್ರೀಯ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆಗಸ್ಟ್ 2 ರಂದು ‘ಯಾನ’ ಸಿನೆಮಾ ತೆರೆಗೆ

Pinterest LinkedIn Tumblr

ಕ್ಯಾಲಿಫೋರ್ನಿಯಾ(USA ): ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ACME ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ, ನಿರ್ಮಾಪಕರಾಗಿರುವ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ಹಾಗು ‘ಐ’ ಎಂಟರ್ಟೈನ್ಮೆಂಟ್’ನ ವೈಭವಿ, ವೈನಿಧಿ ಮತ್ತು ವೈಸಿರಿ ನಿರ್ಮಿಸಿರುವ “ಯಾನ” ಕನ್ನಡ ಸಿನೆಮಾ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಆಗಸ್ಟ್ 2 ರಂದು ಬಿಡುಗಡೆಯಾಗಲಿದೆ.

ಗಲ್ಫ್ ರಾಷ್ಟ್ರವಾದ ದುಬೈ, ಮಸ್ಕತ್ ಜೊತೆಗೆ ಈಗ ಕ್ಯಾಲಿಫೋರ್ನಿಯಾದಲ್ಲೂ ಯಾನ ಸಿನಿಮಾ ಬಿಡುಗಡೆಯಾಗುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಲು ಮುಂದಾಗಿದೆ.

ಯಾನ ಸಿನಿಮಾವು ಕಸ್ತೂರಿ ಮೀಡಿಯಾ ಪ್ರಾಯೋಜಕತ್ವದಲ್ಲಿ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವ SF BAY AREA cine loungeನಲ್ಲಿ ಆಗಸ್ಟ್ 2 ರಂದು ರಾತ್ರಿ 7.30ಕ್ಕೆ ಪ್ರಥಮ ಪ್ರದರ್ಶನ ಕಾಣಲಿದೆ. ಆಗಸ್ಟ್ 3 ಮತ್ತು 4 ರಂದು ಚಿತ್ರ ಪ್ರದರ್ಶನ ಮುಂದುವರಿಯಲಿದೆ.

https://www.facebook.com/harish.sherigar.5/videos/10206350385394849/?t=3

ಕರ್ನಾಟಕದಲ್ಲಿ ಯಾನ ಸಿನಿಮಾ ಸಾಕಷು ಸುದ್ದಿ ಮಾಡುವ ಜೊತೆಗೆ ಸಿನಿ ರಸಿಕರ ಮನಗೆದ್ದಿದೆ. ಕುಟುಂಬ ಸಮೇತರಾಗಿ ಬಂದು ನೋಡುವಂಥ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕಿ ವಿಜಯ ಲಕ್ಷ್ಮಿ ಸಿಂಗ್.

ನಟ ಜೈಜಗದೀಶ್‌ ಹಾಗು ವಿಜಯ ಲಕ್ಷ್ಮಿ ಸಿಂಗ್ ಪುತ್ರಿಯರಾದ ವೈಭವಿ, ವೈನಿಧಿ ಮತ್ತು ವೈಸಿರಿ ‘ಈ ಚಿತ್ರದಲ್ಲಿ ನಾಯಕಿಯರಾಗಿದ್ದು, ಇವರ ಸುತ್ತವೆ ಚಿತ್ರದ ಕಥೆ ಹೆಣೆಯಲಾಗಿದೆ.

ಹಿರಿಯ ನಟ ಅನಂತ್‌ ನಾಗ್‌ ಮತ್ತು ಸುಹಾಸಿನಿ ಈ ಸಿನೆಮಾದಲ್ಲಿ ಮತ್ತೆ ಬಣ್ಣ ಹಚ್ಚಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ. ನಾಯಕರಾಗಿ ಸುಮುಖ, ಚಕ್ರವರ್ತಿ ಹಾಗೂ ಅಭಿಷೇಕ್‌ ನಟಿಸಿದ್ದು,ಇವರಿಗೆ ಇದು ಮೊದಲ ಸಿನೆಮಾವಾಗಿದೆ.

ಕನ್ನಡನಾಡಿನ ಬಹುತೇಕ ಮಾಧ್ಯಮಗಳು ಚಿತ್ರವನ್ನು ಮುಕ್ತಕಂಠದಿಂದ ಹೊಗಳಿದ್ದು ಚಿತ್ರದ ಬಗ್ಗೆ ಒಳ್ಳೆಯ ವಿಮರ್ಶೆಯನ್ನು ವ್ಯಕ್ತಪಡಿಸಿವೆ.

ಮೂವರು ಹುಡುಗಿಯರ ಬದುಕಿನ ಪಯಣವೇ ಈ ಸಿನಿಮಾ. ಬದುಕಿನಲ್ಲಿ ಬಂದು ಹೋಗಬಹುದಾದ ಘಟನೆಗಳೇ ಯಾನ ಕತೆ. ಜತೆಗೆ ತೆರಳುವ ಗೋವಾ ಪಯಣದ ಕತೆ ಬದುಕಿನ ಕತೆಯನ್ನೂ ಹೇಳುತ್ತದೆ. ಸಿನೆಮಾವನ್ನು ಚಿತ್ರದುರ್ಗ, ದಾವಣಗೆರೆ, ಮೂಡಿಗೆರೆ, ಗೋವಾ, ಉತ್ತರಕರ್ನಾಟಕದ ಯಾನ ಸೇರಿದಂತೆ ಅನೇಕ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ.

ಈ ಸಿನಿಮಾದಲ್ಲಿ ಒಟ್ಟು ಏಳು ಹಾಡುಗಳಿವೆ. ಯೋಗರಾಜ್‌ ಭಟ್‌, ಜಯಂತ್‌ ಕಾಯ್ಕಿಣಿ ಕೂಡ ಗೀತೆಗಳನ್ನು ಬರೆದಿದ್ದಾರೆ. ಇನ್ನೂ ವಿಶೇಷ ಎಂದರೆ ನಾಯಕ, ನಾಯಕಿಯರು ಅಷ್ಟೇ ಅಲ್ಲದೆ ತಂತ್ರಜ್ಞರು ಸೇರಿ ಒಟ್ಟು 40 ಮಂದಿ ಹೊಸಬರಿಗೆ ಸಿನಿಮಾದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಚಿತ್ರದಲ್ಲಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಗಡ್ದಪ್ಪ, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರು ನಟಿಸಿದ್ದಾರೆ.

ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿಜಯಲಕ್ಷ್ಮೀಸಿಂಗ್ ಹಾಗೂ ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ.

ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿದೆ.

Comments are closed.