ಮನೋರಂಜನೆ

ನಟ ದರ್ಶನ್-ವಿಜಯಲಕ್ಷ್ಮಿ ದಂಪತಿ ಮಧ್ಯೆ ಮತ್ತೆ ಜಗಳ : ಘಟನೆ ಬಗ್ಗೆ ದರ್ಶನ್ ಪತ್ನಿ ಹೇಳಿದ್ದೇನು…?

Pinterest LinkedIn Tumblr

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

https://twitter.com/vijayaananth2/status/1160426215808749569

ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ತಾಯಿಗೆ ಹೊಡೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಹಲವು ಮಾತುಗಳು ಕೇಳಿಬಂದಿತ್ತು. ಆದರೆ ಈ ಎಲ್ಲ ವದಂತಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ವಿಜಯಲಕ್ಷ್ಮಿ ಅವರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ವದಂತಿಯನ್ನು ಅಲ್ಲಗಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗೆ ಆಧಾರವಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಹಬ್ಬಿರುವ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ.

Comments are closed.