ಮನೋರಂಜನೆ

‘ಹಿಂದಿ’ ಹೇರಿಕೆ ಕುರಿತ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದ ಸೂಪರ್ ಸ್ಟಾರ್ ರಜನಿಕಾಂತ್ !

Pinterest LinkedIn Tumblr

ಒಂದೇ ಭಾಷೆ ಒಂದೇ ದೇಶ ಎಂಬ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಈಗಾಗಲೆ ಹಲವಾರು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಸಹ ಈ ಬಗ್ಗೆ ಮೌನ ಮುರಿದಿದ್ದಾರೆ. “ಯಾವುದೇ ಭಾಷೆಯನ್ನು ಏಕ ಭಾಷೆ ಎಂಬ ಪರಿಕಲ್ಪನೆಯಲ್ಲಿ ಹೇರಿಕೆ ಮಾಡುವುದು ಸರಿಯಲ್ಲ. ಈ ದೇಶದಲ್ಲಿ ಅದು ಸಾಧ್ಯವಾಗುವುದೂ ಇಲ್ಲ” ಎಂದಿದ್ದಾರೆ.

ದೇಶಕ್ಕೆ ಒಂದೇ ಭಾಷೆ ಎಂಬುದು ಭಾರತಕ್ಕಷ್ಟೇ ಅಲ್ಲ ಯಾವುದೇ ದೇಶದ ಏಕತೆ ಹಾಗೂ ಅಭಿವೃದ್ದಿಗೆ ಒಳ್ಳೆಯದಲ್ಲ ಎಂದಿದ್ದಾರೆ. ನಮ್ಮ ದೇಶದಲ್ಲಿ ಯಾವುದೋ ಒಂದು ಭಾಷೆಯನ್ನು ಹೇರುವುದು ಸಾಧ್ಯವಿಲ್ಲ ಎಂದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ರಜನಿಕಾಂತ್ ಮಾತನಾಡುತ್ತಾ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘

ಮುಖ್ಯವಾಗಿ ಹಿಂದಿಯನ್ನು ಹೇರಿದರೆ, ತಮಿಳುನಾಡಿನಲ್ಲಷ್ಟೇ ಅಲ್ಲ, ಯಾವುದೇ ದಕ್ಷಿಣದ ರಾಜ್ಯ ಇದನ್ನು ಒಪ್ಪಲ್ಲ. ಉತ್ತರದ ಹಲವಾರು ರಾಜ್ಯಗಳು ಇದನ್ನು ವಿರೋಧಿಸುತ್ತವೆ ಎಂದು ಹಿಂದಿ ಹೇರಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ ರಜನಿಕಾಂತ್.

ಈ ಹಿಂದೆ ನಟ, ರಾಜಕಾರಣಿ ಕಮಲ್ ಹಾಸನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. “ಭಾರತ ಗಣರಾಜ್ಯವಾದಾಗ ವೈವಿಧ್ಯತೆಯಲ್ಲಿ ಏಕತೆ ಎಂಬ ಭರವಸೆ ನೀಡಲಾಗಿದೆ. ಶಾ, ಸುಲ್ತಾನ್ ಅಥವಾ ಯಾವುದೇ ಸಾಮ್ರಾಟ್‍ರಿಂದ ಆ ಭರವಸೆಯನ್ನು ಹಿಂಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಒಂದು ದೇಶ, ಒಂದೇ ಭಾಷೆ ಎನ್ನುವಂತಹ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಸಹ ಸಿಡಿದೆದ್ದಿದ್ದರು. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

Comments are closed.