ಮನೋರಂಜನೆ

ಬಾಲಿವುಡ್ ಬೆಡಗಿ ಅಲಿಯಾ ಭಟ್ ರಿಂದ ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್

Pinterest LinkedIn Tumblr


ಮುಂಬೈ: ಬಾಲಿವುಡ್ ಬೆಡಗಿ ಅಲಿಯಾ ಭಟ್ ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದು, ಇದೀಗ ಆ ಫೋಟೋಗಳು ವೈರಲ್ ಆಗುತ್ತಿದೆ.

ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ.

ಇತ್ತೀಚೆಗೆ ರಣ್‍ಬೀರ್ ಹಾಗೂ ಅಲಿಯಾ ನವೆಂಬರ್‌ನಲ್ಲಿ ಫ್ರಾನ್ಸ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್‍ಸೈಟ್‍ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್‍ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್‌ನ ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್‌ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Comments are closed.