
ಚಿಕ್ಕಬಳ್ಳಾಪುರ: ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳೂ ಭಾರೀ ಪ್ರಚಾರದಲ್ಲಿ ತೊಡಗಿವೆ. ಚಿಕ್ಕಬಳ್ಳಾಪುರ ವಿಧಾನಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಸಿಮಾ ಹೀರೋ, ಹೀರೋಯಿನ್‌ಗಳೇ ಪ್ರಚಾರಕ್ಕೆ ನಿಂತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ, ನಟರಾದ ದಿಗಂತ್ ಹಾಗೂ ಭುವನ್ ಅವರು ಗುರುವಾರ ಚುನಾವಣಾ ಪ್ರಚಾರ ನಡೆಸಿ ಸುಧಾಕರ್ ಪರ ಮತ ಯಾಚಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷಿಕಾ ಪೂಣಚ್ಛ, ಡಾ.ಸುಧಾಕರ್ ಅವರು ತುಂಬಾ ಒಳ್ಳೆಯ ನಾಯಕ. ಅವರು ಈ ಚುನಾವಣೆಯಲ್ಲಿ ಗೆಲ್ಲಬೇಕು. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಕಡೆ ಉತ್ತಮ ರಸ್ತೆಗಳನ್ನು ನಿರ್ಮಿಸಿದ್ದಾರೆ. ಸುಧಾಕರ್ ರೀತಿಯ ಡೈನಾಮಿಕ್ ನಾಯಕರು ಈ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೇಕಾಗಿದ್ದಾರೆ. ಜನರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುವ ರಾಜಕಾರಣಿಗಳು ನಮಗೆ ಬೇಕು ಎಂದು ಹೇಳಿದರು.
ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡಿನಲ್ಲಿ ಪ್ರತಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ನಟರು, ಡಾ.ಕೆ.ಸುಧಾಕರ್ ಅವರು ಅಭಿವೃದ್ಧಿಯ ಹರಿಕಾರು. ಅವರು ಈ ಬಾರಿಯೂ ಗೆಲುವು ಸಾಧಿಸಲಿದ್ದು, ಮಂತ್ರಿಯಾಗಬೇಕು ಎಂಬುದು ನಮ್ಮ ಆಸೆ ಎಂದು ಅಭಿಪ್ರಾಯಪಟ್ಟರು.
Comments are closed.