
ಅಮೀನಗಡ (ಬಾಗಲಕೋಟೆ): ಸಮೀಪದ ಸುಕ್ಷೇತ್ರ ಸಿದ್ದನಕೊಳ್ಳದ ಸಿದ್ದಶ್ರೀ ಉತ್ಸವದ ನಿಮಿತ್ತ 2020 ನೇ ಸಾಲಿನ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರನ್ನು ಅಯ್ಕೆ ಮಾಡಲಾಗಿದೆ.
ಸಮೀಪದ ಸಿದ್ದನಕೊಳ್ಳದ ನಿರಂತರ ದಾಸೋಹ ಹಾಗೂ ಕಲಾ ಪೋಷಕ ಮಠದಲ್ಲಿ ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಸಿದ್ದಶ್ರೀ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮುಂಬರುವ 2020 ಜ.14 ರಿಂದ ಮೂರು ದಿನಗಳ ಕಾಲ ನಡೆಯುವ ಸಿದ್ದಶ್ರೀ ಉತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಮತ್ತು ಜ.15 ರಂದು ಉತ್ಸವದಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಕಾರ್ಯಕ್ರಮ ನೀಡಲಿದ್ದಾರೆ.
ಪ್ರಶಸ್ತಿಯು 25 ಸಾವಿರ ರೂ ನಗದು,ಫಲಕ,ನೆನಪಿನ ಕಾಣಿಕೆ, ಸನ್ಮಾನವನ್ನು ಹೊಂದಿದೆ.
ಈ ಹಿಂದೆ ಸಿದ್ದಶ್ರೀ ಪ್ರಶಸ್ತಿಯನ್ನು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ,ಅಂಧರಿಗೆ ಕಣ್ಣಾಗಿ ಲಕ್ಷಾಂತರ ಮಕ್ಕಳಿಗೆ ಆಶ್ರಯ ನೀಡಿದ ಪೂಜ್ಯಶ್ರೀ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಮರಣೋತ್ತರವಾಗಿ ನೀಡಿದೆ,ಶಿಕ್ಷಣ ಕ್ರಾಂತಿ ನಿರ್ಮಾಣ ಮಾಡಿದ ಮೋಹನ ಆಳ್ವಾ,ನಿರ್ದೇಶಕ ಉಮೇಶ
ಪುರಾಣಿಕಮಠ,ಗುರು ಗೋವಿಂದ ಭಟ್ಟರ ಮರಿ ಮೊಮ್ಮಗ ನಾಡೋಜಿ ಪ್ರಶಸ್ತಿ ಪುರಸ್ಕೃತ ಮಹೇಶ ಜೋಶಿಯವರಿಗೆ ಈ ಪ್ರಶಸ್ತಿ ನೀಡಲಾಗಿತ್ತು ಈ ಭಾರಿಯ 6ನೇ ಸಿದ್ದಶ್ರೀ ಪ್ರಶಸ್ತಿಯನ್ನು ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರ ಸಂಗೀತ ಕ್ಷೇತ್ರದ ಸಾಧನೆ ಗುರುತಿಸಿ ಈ ಪ್ರಶಸ್ತಿಯನ್ನು ಮಧುಶ್ರೀ ಅವರಿಗೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ತಿಳಿಸದ್ದಾರೆ.
Comments are closed.