ಮನೋರಂಜನೆ

ನಿಖಿಲ್ ಕುಮಾರಸ್ವಾಮಿ ಜೊತೆ ಮದುವೆ ವದಂತಿ: ಮೌನ ಮುರಿದ ಡಿಂಪಲ್ ಕ್ವೀನ್ ರಚಿತಾ ರಾಮ್

Pinterest LinkedIn Tumblr


ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ತಮ್ಮ ಮದುವೆ ಊಹಾಪೋಹಗಳಿಗೆ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಚಿತಾ ರಾಮ್, ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಚಿತಾ ರಾಮ್. ಈ ನಡುವೆ ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ಕೊಡಲು ಬಯಸುತ್ತೇನೆ. ನನ್ನ ಸಿನಿಮಾಗಳ ಕುರಿತಾದ ವಿಷಯಗಳಾಗಲಿ ಅಥವಾ ವೈಯಕ್ತಿಕ ವಿಷಯಗಳಾಗಲಿ ನನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಅದು ಸತ್ಯವೆಂದು ಪರಿಗಣಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಮನರಂಜನೆಗಾಗಿ ಸುಳ್ಳು ವದಂತಿಗಳಗಳನ್ನು ಸೃಷ್ಟಿ ಮಾಡಿದರೆ ಖುಷಿ ಉಂಟಾಗಬಹುದು. ಆದರೆ ಅದರಿಂದ ನನಗೆ ಹಾಗೂ ವದಂತಿಗಳಲ್ಲಿ ಸಿಲುಕಿದ ಸಂಬಂಧಪಟ್ಟ ವ್ಯಕ್ತಿಗಳಿಗೆ ಬೇಸರ ಉಂಟಾಗುತ್ತದೆ ಎಂಬ ವಿಷಯ ಅರ್ಥ ಮಾಡಿಕೊಂಡರೆ ಉತ್ತಮ ಎಂದು ಹೇಳಿದ್ದಾರೆ.

ಅತಿ ಮುಖ್ಯವಾದ ಸಂಗತಿ ಏನೆಂದರೆ ಸದ್ಯಕ್ಕೆ ನನ್ನ ಮದುವೆ ನಿಶ್ಚಯವಾಗಿಲ್ಲ. ನಾನು ಮದುವೆಯಾಗುವ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ತಿಳಿಸಿ ಎಲ್ಲರ ಸಮ್ಮುಖದಲ್ಲಿ ಗುರು ಹಿರಿಯರ ಆಶೀರ್ವಾದದೊಂದಿಗೆ ಆಗುತ್ತೇನೆ. ಸುಳ್ಳು ವದಂತಿಗಳನ್ನು ನಂಬಿ ವೈಯಕ್ತಿಕ ವಿಚಾರಗಳ ಬಗ್ಗೆ ನಗೆಪಾಟಲು ಮಾಡಬೇಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನಿಮ್ಮ ರಚಿತಾರಾಮ್ ಎಂದು ಮನವಿ ಮಾಡಿಕೊಂಡಿದ್ದಾರೆ.

Comments are closed.