ಮನೋರಂಜನೆ

ಅರ್ಜುನ್‌ ಜನ್ಯ ಹೃದಯಾಘಾತಕ್ಕೆ ಕಾರಣ ತಿಳಿಸಿದ ವೈದ್ಯರು!

Pinterest LinkedIn Tumblr


‘ಇದೇ ಭಾನುವಾರ ಮಧ್ಯಾಹ್ನ ಅರ್ಜುನ್ ಜನ್ಯ ನಮ್ಮ ಆಸ್ಪತ್ರೆಗೆ ಗ್ಯಾಸ್ಟ್ರಿಕ್, ತಲೆ ನೋವು, ಎದೆ ನೋವು ಹಾಗೂ ಬೆನ್ನು ನೋವು ಎಂದು ದಾಖಲಾಗಿದ್ದರು. ಇದಾದ ಬಳಿಕ ಆಗ ನಾವು ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ನಂತರ ಮಂಗಳವಾರ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸ ಕಂಡುಬಂದಿತ್ತು. ಅಲ್ಲದೆ ಅರ್ಜುನ್ ಅವರಿಗೆ ಬೆನ್ನು, ಎದೆ ಹಾಗೂ ತಲೆ ನೋವು ಜಾಸ್ತಿಯಾಗಿತ್ತು. ಹಾಗಾಗಿ ಮತ್ತೆ ಇಸಿಜಿ ಮಾಡಿಸಿದ್ದೆವು’ ಎಂದು ವೈದ್ಯರು ತಿಳಿಸಿದ್ದಾರೆ.

ಇಸಿಜಿ ವರದಿ ಬಳಿಕ ಅರ್ಜುನ್ ಅವರಿಗೆ ಹೊಟ್ಟೆ ನೋವು ಕಡಿಮೆ ಆಯಿತು. ಆದರೆ ತುಂಬಾ ಬೆನ್ನು ಹಾಗೂ ತಲೆ ನೋವು ಮುಂದುವರಿದಿತ್ತು. ಸ್ವಲ್ಪ ಎದೆ ನೋವು ಕೂಡ ಕಾಣಿಸಿಕೊಂಡಿತ್ತು. ‘ನಂತರ ಇಸಿಜಿಯಲ್ಲಿ ಬಹಳ ವ್ಯತ್ಯಾಸ ಕಂಡಿದ್ದರಿಂದ ತಕ್ಷಣ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ವಿ. ಆಗಲೇ ಶೇ. 99% ಹಾರ್ಟ್ ಬ್ಲಾಕೇಜ್ ಆಗಿದೆ ಎಂಬುದು ತಿಳಿಯಿತು. ತಕ್ಷಣ ಅವರ ಕುಟುಂಬಸ್ಥರು ಜೊತೆ ಮಾತನಾಡಿ ಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು. ಮಂಗಳವಾರ ಬೆಳಗ್ಗೆ 2.30ಕ್ಕೆ ಅರ್ಜುನ್ ಅವರಿಗೆ ಆಸ್ಪತ್ರೆಯ ತಂಡ ಆಂಜಿಯೋಪ್ಲ್ಯಾಸ್ಟಿ ಮಾಡಿದ್ದೇವೆ. ಇನ್ನು 2 ಗಂಟೆ ತಡವಾಗಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು. ಸದ್ಯ ಎಲ್ಲವೂ ಸರಿಯಾಗಿದೆ. ಅರ್ಜುನ್ ಜನ್ಯ ಕ್ಷೇಮವಾಗಿದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದಲೂ ಸಖತ್‌ ಹಿಟ್‌ ಹಾಡುಗಳನ್ನು ನೀಡುತ್ತಲೇ ಬಂದಿದ್ದಾರೆ ಅರ್ಜುನ್‌ ಜನ್ಯ. ಕೆಲಸದ ಒತ್ತಡದಿಂದ ಅವರಿಗೆ ಲಘು ಹೃದಯಾಘಾತವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ನಟ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರಕ್ಕೆ ಕೆಲಸ ಮಾಡುತ್ತಿದ್ದು, ಈ ಚಿತ್ರ ಮಾರ್ಚ್ 21ಕ್ಕೆ ಆಡಿಯೋ ಲಾಂಚ್ ಆಗಬೇಕಿತ್ತು. ಮಾರ್ಚ್‌ 21ಕ್ಕೆ ಅರ್ಜುನ್ ಜನ್ಯ ನೈಟ್ಸ್‌ನೊಂದಿಗೆ ‘ರಾಬರ್ಟ್’ ಸಿನಿಮಾದ ಆಡಿಯೋ ಲಾಂಚ್ ಮಾಡಬೇಕಾದ ಹಿನ್ನೆಲೆ ಒತ್ತಡದಿಂದ ಹೃದಯಾಘಾತವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

Comments are closed.