ಮನೋರಂಜನೆ

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ !

Pinterest LinkedIn Tumblr

ಚಂಡೀಗಡ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಸೋದರ ಮಾವ ಮತ್ತು ಪೊಲೀಸ್ ಅಧಿಕಾರಿ ಒ.ಪಿ ಸಿಂಗ್ ಆರೋಪಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವ ಒ.ಪಿ.ಸಿಂಗ್ ಅವರು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದು ಹರಿಯಾಣ ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಸುಶಾಂತ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಬಲ್ಲ ಮೂಲಗಳ ಪ್ರಕಾರ ಆತನ ಸಾವಿನ ಹಿಂದೆ ಯಾರದ್ದೋ ಅಟವಿದೆ ಹೀಗಾಗಿ ಪ್ರಕರಣ ಸಂಬಂಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ಸುಶಾಂತ್ ಸಾವಿಗೆ ಹರಿಯಾಣ ಸಿಎಂ ಮನೋಹರ್ ಲಾಲ್ ಕತ್ತಾರ್ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನಿಂದ ಸಿನಿಮಾ ರಂಗಕ್ಕೆ ಹಾಗೂ ಸಮಾಜಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ.

Comments are closed.