ಮನೋರಂಜನೆ

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ; ಸಲ್ಮಾನ್ ಖಾನ್, ಜೋಹರ್, ಬನ್ಸಾಲಿ, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Pinterest LinkedIn Tumblr

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಹಾರ ಮೂಲಕ ಸುಧೀರ್ ಕುಮಾರ್ ಓಜಾ ಎಂಬುವವರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ 306, 109, 504 & 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಓಝಾ ಅವರು, ಸುಶಾಂಕ್ ಅವರನ್ನು 7 ಸಿನಿಮಾಗಳಿಂದ ಕೈಬಿಡಲಾಗಿತ್ತು. ಅಲ್ಲದೆ, ಕೆಲ ಸಿನಿಮಾಗಳು ಕೂಡ ಬಿಡುಗಡೆಗೊಂಡಿರಲಿಲ್ಲ. ಇಂತಹ ಪರಿಸ್ಥಿತಿಗಳಿಂದಾಗಿ ನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದೇನೆಂದು ತಿಳಿಸಿದ್ದಾರೆ.

Comments are closed.