ಮುಂಬೈ: ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತಾಯಿ ಹಾಗೂ ಮಗಳಿಗೆ ನೆಗೆಟಿವ್ ವರದಿ ಬಂದಿದ್ದು, ಐಶ್ವರ್ಯಾ ರೈ ಪತಿ ಅಭಿಷೇಕ್ ಬಚ್ಚನ್ ಹಾಗೂ ಮಾವ ಅಮಿತಾಭ್ ಬಚ್ಚನ್ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದಾರೆ. ಈ ತಿಂಗಳ ಆರಂಭದಲ್ಲಿ ಎಲ್ಲರಿಗೂ ಕೊರೋನಾ ಸೋಂಕು ತಗುಲಿತ್ತು.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅಭಿಷೇಕ್, ‘ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗೆ ಧನ್ಯವಾದಗಳು. ಐಶ್ವರ್ಯಾ ಮತ್ತು ಆರಾಧ್ಯ ಗುಣಮುಖರಾಗಿದ್ದಾರೆ.ಅವರಿಬ್ಬರ ಕೊರೊನಾ ವರದಿ ನೆಗೆಟಿವ್ ಆಗಿದೆ. ಅವರೀಗ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದು, ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯರ ಆರೈಕೆಯಲ್ಲಿ ಆಸ್ಪತ್ರೆಯಲ್ಲೇ ಇರಲಿದ್ದೇವೆ’ ಎಂದು ಹೇಳಿದ್ದಾರೆ.
ಜುಲೈ 11 ರಂದು ತಮ್ಮ ನಿವಾಸದಿಂದ ಆಸ್ಪತ್ರೆಗೆ ತೆರಳಿದ ಅಮಿತಾಭ್, ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಇರುತ್ತೇನೆ ಎಂದು ತಿಳಿಸಿದ್ದರು.
ಮರುದಿನವೇ ಐಶ್ವರ್ಯಾ ರೈ ಮತ್ತು ಪುತ್ರಿ ಆರಾಧ್ಯಗೂ ಕೊರೋನಾ ಇರುವುದು ದೃಢಪಟ್ಟಿತ್ತು.ಆದರೆ, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ,ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ,ಕೆಲ ದಿನಗಳ ನಂತರ ಐಶ್ವರ್ಯಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಕೂಡಲೇ ಅವರನ್ನು ಮತ್ತು ಆರಾಧ್ಯಳನ್ನು ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅಮ್ಮ-ಮಗಳು ಗುಣಮುಖರಾಗಿ, ಮನೆಗೆ ಮರಳಿದ್ದಾರೆ.
Comments are closed.