ಮನೋರಂಜನೆ

ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್: ಕಂಗನಾ, ರಂಗೋಲಿ ಚಾಂಡೇಲ ವಿರುದ್ಧ ದೂರು

Pinterest LinkedIn Tumblr


ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ ವಿರುದ್ಧ ಮುಂಬೈ ಮೂಲದ ವಕೀಲರು ಬುಧವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಎರಡು ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಕಾರಣದೊಂದಿಗೆ ದೂರು ದಾಖಲಾಗಿದೆ.

ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಚಾಂಡೇಲ ಅವರ ಖಾತೆಯನ್ನು ಟ್ವಿಟ್ಟರ್ ಇಂಡಿಯಾ ಅಮಾನತುಗೊಳಿಸಿತ್ತು.

ಮುಂಬೈನ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅವರ ಅರ್ಜಿಯ ಮೊದಲ ವಿಚಾರಣೆಯನ್ನು ಆಗಸ್ಟ್ 14 ರಂದು ನಿಗದಿಪಡಿಸಲಾಗಿದೆ ಎಂದು ದೂರುದಾರ ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್ ಹೇಳಿದ್ದಾರೆ.

Comments are closed.